Ode to the west wind

Join Us on WhatsApp

Connect Here

ಪ್ರತಾಪ್ ಸಿಂಹ ತಮ್ಮ ವಿಕ್ರಂ ಬಂಧನ ಅನಿವಾರ್ಯ: ಅರಣ್ಯ ಸಚಿವ ಖಂಡ್ರೆ

WhatsApp
Facebook
Twitter
LinkedIn

ವಿಕ್ರಂ ಸಿಂಹ ಬಂಧನದ ಬಗ್ಗೆ ಅರಣ್ಯ ಸಚಿವರ ಪ್ರತಿಕ್ರಿಯೆ

ಬೀದರ್, ಡಿ. 30:

ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ  ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ  ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.


ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲಿಯೇ ಆಗಲೀ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೆ ಅಕ್ರಮವಾಗಿ ಮರ ಕಡಿಯುವುದು ಅಪರಾಧ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ.
ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ. ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮವಹಿಸದ ಮತ್ತು ನಿಯಮಾನುಸಾರ  ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

You Might Also Like This