
ಹಾಸನ : ಅರಣ್ಯದಂಚಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅರಣ್ಯ ಭೂಮಿಯನ್ನು ಯಾವುದೇ ರೆಸಾರ್ಟ್ ಅಥವಾ ಹೋಂಸ್ಟೇ ಒತ್ತುವರಿ ಮಾಡಿದ್ದರೆ ಸೂಕ್ತ ಕಾನೂನುಕ್ರಮ ಜರುಗಿಸಿ, ಒತ್ತುವರಿ ತೆರವು ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ, ಅವರು, ಇತ್ತೀಚೆಗೆ ಆನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಶಾರ್ಪ್ ಶೂಟರ್ ವೆಂಕಟೇಶ್ ಅವರ ನಿವಾಸಕ್ಕೆ ತೆರಳಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಆನೆ ಶೂಟರ್ ವೆಂಕಟೇಶ್ ಸಾವು ಪ್ರಕರಣ ವಿಚಾರವಾಗಿ ಮಾತನಾಡಿದ ಅರಣ್ಯ ಸಚಿವರು, ಕಾರ್ಯಾಚರಣೆಯಲ್ಲಿ ಲೋಪ ಆಗಿದೆ ಎನ್ನುವ ದೂರಿದೆ. ಆ ದೂರಿನ ಬಗ್ಗೆ ನಮ್ಮ ಇಲಾಖೆ ವತಿಯಿಂದ ಅಧಿಕಾರಿಗೆ ಮೆಮೊ ಇಶ್ಯು ಆಗಿದೆ. ತನಿಖೆಗೆ ನಾವು ಆದೇಶ ಮಾಡಿದ್ದೇವೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಜರುಗಿಸಲಾಗುವುದು. ಕಾಡಾನೆ ಟಾಸ್ಕ್ ಫೋರ್ಸ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿಗೆ ಸಂಬಳ ನೀಡದಿರುವ ವಿಚಾರಕ್ಕೆ ಉತ್ತರಿಸಿ, ಯಾರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಅವರಿಗೆ, ಗುತ್ತಿಗೆ ಪಡೆದಿರುವವರು ಸಂಬಳ ಕೊಡಬೇಕು. ನಾವು ಈಗಾಗಲೇ ನಮ್ಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ತಿಂಗಳ ತಿಂಗಳು ಸರಿಯಾಗಿ ಸಂಬಳ ಕೊಡದ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಮಾಡುವಂತೆ ಹೇಳಿದ್ದೇವೆ. ಸರ್ಕಾರದ ವತಿಯಿಂದ ಎಷ್ಟು ಅನುದಾನ ಕೊಡಬೇಕಿದೆ ಅವೆಲ್ಲಾ ಹಣ ಬಿಡುಗಡೆ ಮಾಡಿದ್ದೇವೆ ತರುವಾಯ ಹಾಸನ ಅರಣ್ಯ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳು ಕಾಡಿನಿಂದ ನಾಡಿಗೆ ಬರುವುದಕ್ಕೆ ಅರಣ್ಯ ಒತ್ತುವರಿ, ಅಕ್ರಮ ಗಣಿಗಾರಿಕೆಯ ಸ್ಫೋಟ, ಮಳೆಯ ಅಭಾವದಿಂದ ಆಹಾರ ಮತ್ತು ನೀರಿನ ಕೊರತೆ ಕಾರಣವಾಗಿದ್ದು, ವನ್ಯಮೃಗಗಳು ಕಾಡಿಗೆ ಬಾರದಂತೆ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಂದರು.