ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿದೆ. ಈ ಹಿನ್ನೆಲೆ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆ ಖಂಡ್ರೆ ನೇತೃತ್ವದಲ್ಲಿ ನಡೆಯಿತು. ಸಭೆ ನಂತರ ಸಚಿವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇಂದು ನಡೆದ ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ನಾಳೆ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು.
ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವಿದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಹಾಲಿ ಇರುವ 16114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದರು.
ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು. ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ ಹೀಗಾಗಿ ನಾಳೆಯ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.
ವಿಶೇಷ ಪ್ಯಾಕೇಜ್ ಗೆ ಒತ್ತಾಯ:
ಈಗಾಗಲೇ ಇರುವ 16114 ಚದರ ಕಿಲೋಮೀಟರ್ ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರು ತಿಳಿಸಿದರು.
ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.
ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ:
ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು.
ರಾಜೇಗೌಡರ ಮನವಿ:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ರಾಜೇಗೌಡರು 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಮನವಿ ಮಾಡಿರುತ್ತಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇಂದು ನಡೆದ ಸಭೆಯಲ್ಲಿ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಇದ್ದರು.

ENGLISH
Karnataka Forest, Ecology, and Environment Minister Eshwar B Khandre chaired a meeting with representatives from 11 districts to discuss the Kasturirangan report on Western Ghats eco-sensitive areas. Khandre suggested approving the report, which already protects 16,114 sq km of eco-sensitive areas around various forests and wildlife sanctuaries. The Centre issued its 6th notification on August 2, and the state government must submit its stance by month-end.
After the meeting, Khandre briefed the media.
“The state has already protected 16,114 sq km of eco-sensitive areas around various forests and wildlife sanctuaries. Today, a meeting was held to gather opinions from ministers, lawmakers, and parliament members of 11 districts affected by the report. These opinions will be discussed on Friday at the Cabinet Sub-Committee meeting, followed by consultations with the Chief Minister Siddaramaiah and then submitted to the Centre after obtaining cabinet approval.
Many representatives expressed concerns that the existing 16,114 sq km eco-sensitive area in the state is already sufficient and increasing it would make life difficult for people living on the forest fringes. They suggested reducing the buffer zone to zero. Some also pointed out that accepting the current 16,114 sq km limit would effectively render the buffer zone meaningless.
The Kasturirangan Committee report identified 20,668 sq km as eco-sensitive areas in the state. However, physical surveys may reveal an even larger area, which will be taken into consideration. The representatives also emphasized that relocating people who have lived in forest areas for generations is not feasible, as they are unlikely to move even if alternative rehabilitation is provided.
Minister stated that the Centre should announce a special package for the 1576 villages in the 16,114 sq km eco-sensitive area in Karnataka, as approving the existing area would inconvenience the locals. He emphasized that Western Ghats conservation is the Centre’s responsibility, given its significance in originating several rivers and facilitating nationwide rainfall.
Clarifying on the buffer zone, Khandre said only encroachments post-2015 should be cleared, and poor farmers’ encroachments (less than 3 acres) won’t be touched, as per the 2015 government order.
Sringeri MLA Rajegowda requested measures to protect those with less than 3 acres of forest encroachment in Chikkamagaluru district.
The meeting was attended by ministers K.J. George, Dr. H.C. Mahadevappa, Satish Jarkiholi, Madhu Bangarappa, Manakala Vaidya, Legislative Council Deputy Chairperson Prathap, Chief Minister’s legal advisors Ponnanna, and MLAs Araga Jnanendra, Nayana Motammal, Rajegowda, Harish Poonja, and MP Shreayas Patel.