ವನ್ಯಜೀವಿ ಅಂಗಾಂಗ ಮರಳಿಸಲು 3 ತಿಂಗಳ ಗಡುವು: ಈಶ್ವರ ಖಂಡ್ರೆ

ಬೆಂಗಳೂರು: ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ,ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಯಿತು.ಅಕ್ರಮವ ಸಂರಕ್ಷಣಾ ಅಧಿನಿಯಮ 1972 ಮತ್ತು ಇತ್ತೀಚೆಗೆ ಅಂದರೆ 2022ರಲ್ಲಿ ಕೇಂದ್ರ ಸರ್ಕಾರ ಈ ಕಾಯಿದೆಗೆ ಮಾಡಿರುವ ತಿದ್ದುಪಡಿಯನ್ವಯ ಯಾವುದೇ ವನ್ಯಜೀವಿಯ ಅಂಗಾಂಗವನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ಸಾಗಾಟ ಮಾಡುವುದು, ಮನೆಯಲ್ಲಿ […]
ಮೃತ ಅರ್ಜುನನ ಹೆಸರಲ್ಲಿ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅವರು, ನಾಡಿನ ಜನರ ಪ್ರೀತಿಗೆ ಪಾತ್ರನಾಗಿದ್ದ ಅರ್ಜನನ ಸಾವು […]