ಚಾರಣಕ್ಕೆ ಆನ್ ಲೈನ್ ಟಿಕೆಟ್ ಎಂದು ಆರಂಭ.?

ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆ ಸ್ಥಗಿತಗೊಳಿಸಲಾದ ಚಾರಣಕ್ಕೆ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದರು. ಸಾಮಾನ್ಯವಾಗಿ […]