ಮಹತ್ವದ ನಿರ್ಣಯ, ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಖಂಡ್ರೆ

ಕಸ್ತೂರಿ ರಂಗನ್ ವರದಿ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ- ಅರಣ್ಯ ಸಚಿವರು ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ […]
ಕಡಲಾಮೆ ಮೊಟ್ಟೆಗಳ ಸಂರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ.

ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರಿಡ್ಲೀ ( ಸಮುದ್ರ ಆಮೆ) ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಅಪರೂಪದ ಆಲೀವ್ ರಿಡ್ಲೀ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಸಂರಕ್ಷಿಸಿರುವುದಾಗಿ ತಿಳಿಸಿದರು. ಕೂಡಲೇ […]