ಚಾರ್ಮಾಡಿ ಘಾಟ್ ಲ್ಲಿ ಸರ್ಕಾರಿ ಬಸ್ ಬ್ರೇಕ್ ಫೇಲ್..!

ಚಾರ್ಮಾಡಿ ಘಾಟ್ ತಿರುವಿನಲ್ಲಿ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಕೂದಲೆಳೆಯಲ್ಲಿ ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಬಳಿ ಬರುವಾಗ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆಗಿದೆ. ಬಸ್ ಬ್ರೇಕ್ ಫೈಲ್ಯೂರ್ ಗ್ರಹಿಸಿದ ಚಾಲಕ, ನಿಯಂತ್ರಣ ತಪ್ತಿದ್ದಂತೆ ಡಿವೈಡರ್ ಗೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾನೆ. ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ ಎಂಜಿನಿಂದ ಹೊಗೆ ಬರಲಾರಂಭಿಸಿದೆ. ಅಷ್ಟರಲ್ಲೇ 43 ಪ್ರಯಾಣಿಕರು […]