ದೇವೀರಮ್ಮನ ದರ್ಶನಕ್ಕೆ ವಸ್ತ್ರ ಸಂಹಿತೆ ಜಾರಿ

ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಆದೇಶ ಜಾರಿಯಾಗಿದೆ. ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದ್ದು ಸೂಚನ ಫಲಕ ವೈರಲ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪವಿರುವ ಬಿಂಡಿಗ ದೇವೀರಮ್ಮನ ದೇವಾಲಯ ರಾಜ್ಯದಲ್ಲೇ ಪ್ರಸಿದ್ಧ ಗಿರಿ ಪ್ರವಾಸಿತಾಣ ಹಾಗೂ ಶ್ರದ್ಧಾ ಸ್ಥಳ. ಚಂದ್ರದ್ರೋಣ ಪರ್ವತಕ್ಕೆ ಹೊಂದಿಕೊಂಡಿರುವ ಈ ಸ್ಥಳ ಸಮುದ್ರ ಮಟ್ಟಕ್ಕಿಂತ ಮೂರು ಸಾವಿರ ಅಡಿ ಎತ್ತರದಲ್ಲಿದೆ. ಇಲ್ಲಿಗೆ ಪ್ರತೀ ವರ್ಷ ದೀಪಾವಳಿ ಹಬ್ಬದ ತರುವಾಯ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು […]