ಅರಣ್ಯ ಇಲಾಖೆ ಸಿಬ್ಬಂದಿಯೇ ಹುಲಿ ಕೊಂದನಾ.?

ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31 ವರ್ಷ) ಮತ್ತು ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19 ವರ್ಷ) ಬಂಧಿತ ಆರೋಪಿಗಳು. ಇನ್ನು ಹಲವರು ಹುಲಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದು ಉಳಿದವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅರಣ್ಯ ಇಲಾಖೆ […]
ಚಾರ್ಮಾಡಿ ಘಾಟ್ ಲ್ಲಿ ಸರ್ಕಾರಿ ಬಸ್ ಬ್ರೇಕ್ ಫೇಲ್..!

ಚಾರ್ಮಾಡಿ ಘಾಟ್ ತಿರುವಿನಲ್ಲಿ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಕೂದಲೆಳೆಯಲ್ಲಿ ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಬಳಿ ಬರುವಾಗ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆಗಿದೆ. ಬಸ್ ಬ್ರೇಕ್ ಫೈಲ್ಯೂರ್ ಗ್ರಹಿಸಿದ ಚಾಲಕ, ನಿಯಂತ್ರಣ ತಪ್ತಿದ್ದಂತೆ ಡಿವೈಡರ್ ಗೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾನೆ. ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ ಎಂಜಿನಿಂದ ಹೊಗೆ ಬರಲಾರಂಭಿಸಿದೆ. ಅಷ್ಟರಲ್ಲೇ 43 ಪ್ರಯಾಣಿಕರು […]
ಕಂದಾಯ-ಅರಣ್ಯ ಭೂಮಿ, ಚಿಕ್ಕಮಗಳೂರು ಕಾಡಾನೆ: ಅರಣ್ಯ ಸಚಿವರ ಮಹತ್ವದ ಸಭೆ.

ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ, ಪರಿಭಾವಿತ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಜಿಲ್ಲೆಯ ಶಾಸಕರುಗಳೊಂದಿಗೆ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿ, ಪರಿಭಾವಿತ (ಡೀಮ್ಡ್)ಅರಣ್ಯದ ವಿಚಾರದಲ್ಲಿ ಈಗಾಗಲೇ […]
ಇಬ್ಬರನ್ನ ಕೊಂದು ಮೂಡಿಗೆರೆ ನಡುಗಿಸಿದ್ದ ಭೈರ ಸೆರೆಸಿಕ್ಕ.

ಮೂಡಿಗೆರೆ ತಾಲೂಕನ್ನೇ ನಡುಗಿಸಿದ್ದ ಕಾಡಾನೆ ಇಬ್ಬರನ್ನ ಬಲಿತೆಗೆದುಕೊಂಡಿತ್ತು. ಅಪಾರ ಪ್ರಮಾಣದ ಬೆಳೆ ನಾಶ ಮಾಡಿತ್ತು. ಜನರ ಸಿಟ್ಟಿಗೆ ಶಾಸಕ ಎಂಪಿ ಕುಮಾರಸ್ವಾಮಿ ಬಟ್ಟೆಯೂ ಹರಿದು ರಾಷ್ಟ್ರೀಯ ಸುದ್ದಿಯಾಗಿತ್ತು. ಹಲವು ವರ್ಷಗಳಿಂದ ಚಾಣಾಕ್ಷತನದಿಂದ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಭೈರಾನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಭೈರ ಹೆಸರು ಸ್ಥಳೀಯರೇ ನೀಡಿದ್ದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಹೊಸಳ್ಳಿಯಲ್ಲಿ ಭಾಗದಲ್ಲಿ ಒಂದು ವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಆನೆಯನ್ನೂ ಸೇರಿ ಈ ಭಾಗದಲ್ಲಿ ಒಟ್ಟು […]
ಈ ನರಹಂತಕ ಕಾಡಾನೆ..! ಮೂವರ ಸಾವು..!

ಕೊನೆಗೂ ಒಂದು ನರ ಹಂತಕ ಕಾಡಾನೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಫಲರಾಗಿದ್ದಾರೆ. ಬಹಳ ದಿನಗಳಿಂದ ತೊಂದರೆ ನೀಡುತ್ತಿದ್ದ ಆನೆ ಸೆರೆಸಿಕ್ಕಿದ್ದಕ್ಕಾಗಿ ಮೂಡಿಗೆರೆ ತಾಲೂಕಿನ ಜನರು ಸಂತಸ ಪಟ್ಟಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಕುಂದೂರು, ಕೆಂಜಿಗೆ ಭಾಗದಲ್ಲಿ ಮೂರು ಕಾಡಾನೆ ಸೆರೆ ಹಿಡಿಯಲು ಆರಂಭಿಸಿ, ಮೊದಲ ದಿನದ ಕಾರ್ಯಾಚರಣೆಯಲ್ಲಿ ಒಂದು ಕಾಡಾನೆ ಸೆರೆ ಹಿಡಿಯಲಾಗಿದೆ. ಬೆಳಗೋಡು ಸಮೀಪದ ಕುಂಡ್ರ ಎಂಬ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಆನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಕೆಡವಿ ಸೆರೆ ಹಿಡಿದರು. ಕಾಡಾನೆ ಗಾತ್ರದಲ್ಲಿ […]