ಹೆಚ್.ಡಿ ಕೋಟೆಯಲ್ಲಿ ಹುಲಿ ಸೆರೆ, ಬಾಲಕನನ್ನ ಕೊಂದಿದ್ದು ಇದೇನಾ.?
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ಕಲ್ಲಹಟ್ಟಿ ಗ್ರಾಮದಲ್ಲಿ ಅರಣ್ಯ ಇಲಾಖೆ ಹುಲಿ ಸೆರೆಹಿಡಿದಿದ್ದು, ವಾರಗಳ ಹಿಂದೆ ಬಾಲಕನನ್ನ ಬಲಿ ತೆಗೆದುಕೊಂಡಿದ್ದ ನರಭಕ್ಷಕ ಹುಲಿ ಇದೇನಾ ಎಂಬ ಅನುಮಾನ ಮೂಡಿದೆ. ಹೆಚ್ ಡಿ ಕೋಟೆ ತಾಲೂಕು ಸಿದ್ದಾಪುರ ಗ್ರಾಮದಲ್ಲಿ ಎಂಟು ವರ್ಷದ ಗಂಡು ಹುಲಿಯನ್ನ ಅರಣ್ಯಾಧಿಕಾರಿಗಳು ಮಂಗಳವಾರ ಸೆರೆ ಹಿಡಿದಿದ್ದಾರೆ. ಮೇಟಿಕುಪ್ಪೆ ವಲಯ ಅರಣ್ಯಾಧಿಕಾರಿಗಳು, ವನ್ಯಜೀವಿ ತಜ್ಞ, ವೈದ್ಯ ರಮೇಶ್ ನೇತೃತ್ವದಲ್ಲಿ ಸಾಕಾನೆಗಳ ಮೂಲಕ ಕಾರ್ಯಾಚಾರಣೆ ನಡೆಸಿ, ಹುಲಿ ಜಾಡು ಹಿಡಿದು ಅರಿವಳಿಕೆ ಚುಚ್ಚು ಮದ್ದು ನೀಡಿದ್ದಾರೆ. […]
ಆದಿವಾಸಿ ವ್ಯಕ್ತಿ ಸಾವು: ಅರಣ್ಯ ಇಲಾಖೆ 17 ಸಿಬ್ಬಂದಿ ವಿರುದ್ಧ FIR:

ಬಂಡೀಪುರ ಅರಣ್ಯ ವಲಯದ ಗುಂಡ್ರೆ ರೇಂಜ್ ನಲ್ಲಿ ಆದಿವಾಸಿ ವ್ಯಕ್ತಿ ಅರಣ್ಯಾಧಿಕಾರಿಗಳ ವಶದಲ್ಲಿದ್ದ ವೇಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತ ಸರಗುರ್ ಪೊಲೀಸರು 17 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ ಸಿ/ಎಸ್ ಟಿ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ಪೊಲೀಸರು ದಾಖಲಿಸಿದ ಎಫ್‌ಐಆರ್ ನಲ್ಲಿ, ಪ್ರಕರಣದಲ್ಲಿ ರೇಂಜ್ ಫಾರೆಸ್ಟ್ ಆಫೀಸರ್ ಅಮೃತೇಶ್, ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ಯಾದವ್, ಇಬ್ಬರು ಅರಣ್ಯಾಧಿಕಾರಿಗಳು ಮತ್ತು ಇತರ 13 ಜನರ ವಿರುದ್ಧ […]