ಅರಗದಲ್ಲಿ ಗರುಡ ಪದ್ಧತಿ ಶಿರಚ್ಛೇದನ ಸ್ಮಾರಕ ಶಿಲ್ಪ ಪತ್ತೆ”

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ (ಪ್ರ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಶಿವಮೊಗ್ಗ ಜಿಲ್ಲೆ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸು.ಎರಡು ಮೀ ಉದ್ದದ ಗ್ರಾನೈಟ್ ಶಿಲೆಯ “ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ”. ಶಿರ ಛೇದನ ಸ್ಮಾರಕ ಶಿಲ್ಪದ ಕುರಿತು: ಶಿಲ್ಪವು ಎರಡು ಪಟ್ಟಿಕೆಗಳಿಂದ ಕೂಡಿದ್ದು ಕೆಳಗಿನ ಪಟ್ಟಿಕೆಯಲ್ಲಿ ವೇಳಾವಳಿ/ಗರುಡ ಹೋಗುವ ವೀರ ಕುದುರೆಯ ಮೇಲೆ ಕುಳಿತು ಕತ್ತಿಯನ್ನು ಹಿಡಿದಿದ್ದಾನೆ. ಇವನಿಗೆ ಹಿಂಭಾಗದಲ್ಲಿ ಛತ್ರಿಯನ್ನು ಸೇವಕ ಹಿಡಿದಿದ್ದಾನೆ. […]