ಅಂಬಾರಿ ಅರ್ಜುನನ ದುರಂತ ಅಂತ್ಯ: 15 ದಿನಗಳಲ್ಲಿ ವರದಿ ಕೈ ಸೇರುತ್ತೆ: ಈಶ್ವರ ಖಂಡ್ರೆ

8 ಬಾರಿ ಅಂಬಾರಿ ಹೊತ್ತ ಅರ್ಜುನ ಸಮಾಧಿಗೆ ಈಶ್ವರ ಖಂಡ್ರೆ ಪುಷ್ಪ ನಮನ. ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಸಮಿತಿಯಿಂದ ಸಾವಿನ ತನಿಖೆ. ಯಸಳೂರು ಮತ್ತು ಬಳ್ಳೆಯಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ. ಹಾಸನ: ಯಸಳೂರು ಅರಣ್ಯ ವಲಯದಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದರೂ, ಅರಣ್ಯ ಸಿಬ್ಬಂದಿಯನ್ನು ರಕ್ಷಿಸಲು ಏಕಾಂಗಿಯಾಗಿ ಹೋರಾಡಿ ಹುತಾತ್ಮನಾದ ಕ್ಯಾಪ್ಟನ್ ಅರ್ಜುನನ ಸಾವಿನ ಕುರಿತಂತೆ ಕೆಲವರು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಉನ್ನತ ತನಿಖಾ ಸಮಿತಿ […]
ಮೃತ ಅರ್ಜುನನ ಹೆಸರಲ್ಲಿ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅವರು, ನಾಡಿನ ಜನರ ಪ್ರೀತಿಗೆ ಪಾತ್ರನಾಗಿದ್ದ ಅರ್ಜನನ ಸಾವು […]