ಪ.ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು,ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, […]
ಚಾರಣಕ್ಕೆ ಆನ್ ಲೈನ್ ಟಿಕೆಟ್ ಎಂದು ಆರಂಭ.?

ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆ ಸ್ಥಗಿತಗೊಳಿಸಲಾದ ಚಾರಣಕ್ಕೆ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದರು. ಸಾಮಾನ್ಯವಾಗಿ […]
ಬಿಸಿಲ ಬೇಗೆ, ಅರಣ್ಯದೊಳಗಿನ ನೀರು ಗುಂಡಿಗಳಿಗೆ ತುರ್ತಾಗಿ ಜಲಪೂರಣ

ಬೆಂಗಳೂರು: ಅರಣ್ಯದೊಳಗೆ ಮೃಗ ಪಕ್ಷಿಗಳಿಗೆ ನೀರಿನ ಕೊರತೆ ಆಗದಂತೆ ನೀರುಗುಂಡಿ (ವಾಟರ್ ಹೋಲ್)ಗಳಿಗೆ ಜಲಪೂರಣ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದು, ಅರಣ್ಯ ಇಲಾಖೆ ಕೆರೆ, ಕಟ್ಟೆಗೆ ನೀರು ತುಂಬಿಸುವ ಕಾರ್ಯ ಆರಂಭಿಸಿದೆ. ಬಂಡೀಪುರ ರಕ್ಷಿತ ಅರಣ್ಯಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಅರಣ್ಯ ಸಚಿವರು, ಮಳೆಯ ಕೊರತೆಯಿಂದ ಬೇಸಿಗೆ ಪೂರ್ವದಲ್ಲೇ ಬಿರುಬಿಸಿಲು ಕಾಣಿಸಿಕೊಂಡಿದ್ದನ್ನ ಪರಿಶೀಲಿಸಿದ್ದರು. ನೀರಿಲ್ಲದೆ ಬರಿದಾಗುತ್ತಿರುವ ಜಲಗುಂಡಿಗಳನ್ನು ಕಂಡು ಕಳವಳ ವ್ಯಕ್ತಪಡಿಸಿದ್ದರು. ಇದರಿಂದ ನೀರು ಅರಸಿ ವನ್ಯಜೀವಿಗಳು ಕಾಡಿನಿಂದ ನಾಡಿಗೆ […]