ಶಿವರಾತ್ರಿಯಂದು ಮೃತ ಧರ್ಮಸ್ಥಳದ ಆನೆ ‘ಲತಾ’

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ‘ಲತಾ’ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ. 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ 50ವರ್ಷಗಳ ಅವಧಿಯಲ್ಲಿ ಧರ್ಮಸ್ಥಳ ದೇವಸ್ಥಾನದ ಜಾತ್ರಾಮಹೋತ್ಸವದಲ್ಲಿ ಈ ಲತಾ ಆನೆ ಮದಗಜಗಮನೆಯಂತೆ ಗಾಂಭೀರ್ಯದ ಹೆಜ್ಜೆ ಹಾಕಿ ಎಲ್ಲರ ಚಿತ್ತ ಸೆಳೆಯುತ್ತಿತ್ತು. ಧರ್ಮಸ್ಥಳದಲ್ಲಿ ಸದ್ಯ ಲಕ್ಷ್ಮಿ, ಶಿವಾನಿ ಎಂಬ ಎರಡು ಆನೆಗಳಿವೆ. ಲತಾ ಆನೆ ಈ ಎರಡು ಆನೆಗಳಿಗೆ ತಾಯಿ ಹಾಗೂ ಅಜ್ಜಿ ಪ್ರೀತಿ ನೀಡಿತ್ತು. ಶಿವಾನಿ […]