ಅರಣ್ಯ ಇಲಾಖೆ ಸಿಬ್ಬಂದಿಯೇ ಹುಲಿ ಕೊಂದನಾ.?

ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31 ವರ್ಷ) ಮತ್ತು ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19 ವರ್ಷ) ಬಂಧಿತ ಆರೋಪಿಗಳು. ಇನ್ನು ಹಲವರು ಹುಲಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದು ಉಳಿದವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅರಣ್ಯ ಇಲಾಖೆ […]